ಬಿಜೆಪಿ ಸೇರ್ಪಡೆ ವಿಚಾರ: ಬಸವರಾಜ ಹೊರಟ್ಟಿ ವಿರುದ್ಧ ಬಿ‌.ಕೆ.ಹರಿಪ್ರಸಾದ್ ವಾಗ್ದಾಳಿ

Update: 2022-05-05 09:02 GMT

ಬೆಂಗಳೂರು: ಜಾತ್ಯತೀತ ಜನತಾ ದಳ(ಜೆಡಿಎಸ್)ನ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ಹೇಳಿರುವುದು 'ಸಂವಿಧಾನಕ್ಕೆ ಮಾಡಿದ ಅಪಚಾರ' ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ‌.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. 

ಈ ಕುರಿತು ಗುರುವಾರ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬಸವರಾಜ ಹೊರಟ್ಟಿ ಅವರು ಸಂವಿಧಾನದ ಪೀಠದಲ್ಲಿದ್ದು ಬಿಜೆಪಿ ಸೇರ್ಪಡೆ ಆಗುವುದಾಗಿ ಹೇಳಿರುವುದು ಸರಿಯಲ್ಲ' ಎಂದು ತಿಳಿಸಿದರು. 

'ಇಲ್ಲಿ ಯಾರು ಯಾವುದೇ ಪಕ್ಷ ಸೇರಬಹುದು. ಆದರೆ, ಸಂವಿಧಾನ ಪೀಠದಲ್ಲಿರುವವರು ನಡೆದುಕೊಳ್ಳುವ ರೀತಿ ಇದಲ್ಲ. ಹೊರಟ್ಟಿಯವರು ಪಕ್ಷಾಂತರ ಕಾಯ್ದೆಯ ಉಲ್ಲಂಘನೆ ಮಾಡಿದ್ದಾರೆ' ಎಂದು ಆರೋಪಿಸಿದರು.  

‘ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮತದಾರರ ಅಭಿಪ್ರಾಯದಂತೆ ನಾನು  ಅಧಿಕೃತವಾಗಿ ಬಿಜೆಪಿ ಸೇರಿದ್ದೇನೆ. ಮೇ 11ಕ್ಕೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ  ಬಿಜೆಪಿ ಸೇರ್ಪಡೆಯಾದ ಬಳಿಕ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದರು. 

ಇದನ್ನೂ ಓದಿ... ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಸಭಾಪತಿ ಬಸವರಾಜ ಹೊರಟ್ಟಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News