ರಾಜ್ಯದಲ್ಲಿ ಗುರುವಾರ 191 ಮಂದಿಗೆ ಕೊರೋನ ದೃಢ: ಸಾವಿನ ಸಂಖ್ಯೆ ಶೂನ್ಯ

Update: 2022-05-05 17:43 GMT

ಬೆಂಗಳೂರು, ಮೇ 5: ರಾಜ್ಯದಲ್ಲಿ ಗುರುವಾರ 191 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, ಸೋಂಕಿನಿಂದ ಯಾರೊಬ್ಬರು ಮೃತಪಡದೆ, 138 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,48,283ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,060ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1854ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 191 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ನಗರ 171, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ಮೈಸೂರು 14. ತುಮಕೂರು 1, ವಿಜಯಪುರ 1, ಯಾದಗಿರಿ 1 ಪ್ರಕರಣಗಳು ಪತ್ತೆಯಾಗಿವೆ. 

ರಾಜಧಾನಿಯಲ್ಲಿ 171 ಜನರಿಗೆ ಸೋಂಕು ದೃಢ: ರಾಜಧಾನಿಯಲ್ಲಿ ಗುರುವಾರ 171 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,84,193 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 17,65,467 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News