×
Ad

ರಾಜ್ಯದಲ್ಲಿ ಗುರುವಾರ 191 ಮಂದಿಗೆ ಕೊರೋನ ದೃಢ: ಸಚಿವ ಕೆ. ಸುಧಾಕರ್

Update: 2022-05-06 10:33 IST
ಸಚಿವ ಸುಧಾಕರ್

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 191 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,854ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. 

ಈ ಸಂಬಂಧ ಕೂ ಮಾಡಿರುವ ಅವರು , ಈ ಅವಧಿಯಲ್ಲಿ ಕೋವಿಡ್‌ನಿಂದ ಯಾರು ಮೃತಪಟ್ಟಿದ್ದಾರೆ. 138 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು,  11,380 ಕೋವಿಡ್ ಟೆಸ್ಟ್ ನಡೆಸಲಾಗಿದೆ. 

ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇಕಡ 1.61ರಷ್ಟಿದ್ದು,  ಬೆಂಗಳೂರು ನಗರದಲ್ಲಿ  171 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,763 ಇದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News