4- 5 ನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ಹಗುರಗೊಳಿಸಲು ಚಿಂತನೆ: ಸಚಿವ ಬಿ.ಸಿ.ನಾಗೇಶ್

Update: 2022-05-06 09:11 GMT
 ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ 2020ರ ಪ್ರಕಾರ 4 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್'ನ್ನು ಹಗುರಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹೋಂವರ್ಕ್ ಹಗುರಗೊಳಿಸುವ ಬಗ್ಗೆ ಚಿಂತನೆ ನಡೆಸಿದ್ದು,  3ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಯಾವುದೇ ಹೋಂವರ್ಕ್  ಸರ್ಕಾರ ಅನುಮತಿಸುವುದಿಲ್ಲ ಎಂದೂ ಹೇಳಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರ ಮಕ್ಕಳಿಗೆ ಹೋಂ ವರ್ಕ್‌ ರದ್ದುಗೊಳಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದರು. ಇದಕ್ಕೆ ಮಕ್ಕಳ ತಜ್ಞರು ಕೂಡಾ ಬೆಂಬಲ ಸೂಚಿಸಿದ್ದಾರೆ. ಇದೀಗ ಶಿಕ್ಷಣ ಸಚಿವ ಹೋಂವರ್ಕ್ ಹಗುರಗೊಳಿಸುವ ಕುರಿತು ಹೇಳಿಕೆ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News