×
Ad

'ವಿಜ್ಞಾನ ಸುಳ್ಳು ಹೇಳುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ': ರಾಹುಲ್ ಗಾಂಧಿ

Update: 2022-05-06 16:08 IST

ಹೊಸದಿಲ್ಲಿ : ಕೋವಿಡ್ ನಿಂದಾಗಿ ಭಾರತದಲ್ಲಿ 4.7 ಮಿಲಿಯನ್ ಗೂ ಅಧಿಕ  ಸಾವು ಸಂಭವಿಸಿದೆ ಎಂಬ ಡಬ್ಲ್ಯು ಎಚ್ ಒ ವರದಿಯನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರವನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ "ವಿಜ್ಞಾನವು ಸುಳ್ಳು ಹೇಳುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ" ಎಂದು ಹೇಳಿದ್ದಾರೆ.

ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಕಡ್ಡಾಯವಾಗಿ ರೂ. 4 ಲಕ್ಷ ಪರಿಹಾರವನ್ನು ನೀಡುವ ಮೂಲಕ ಸರಕಾರವು ಆಸರೆಯಾಗಬೇಕು ಎಂದು ಗಾಂಧಿ ಒತ್ತಾಯಿಸಿದರು.

 "ಕೋವಿಡ್ ಸಾಂಕ್ರಾಮಿಕ ರೋಗದಿಂದ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಸರಕಾರ ಹೇಳಿಕೊಂಡಂತೆ 4.8 ಲಕ್ಷ ಅಲ್ಲ. ವಿಜ್ಞಾನ ಸುಳ್ಳು ಹೇಳುವುದಿಲ್ಲ. ಮೋದಿ ಸುಳ್ಳು ಹೇಳುತ್ತಾರೆ" ಎಂದು ರಾಹುಲ್ ಗಾಂಧಿ ಟ್ವೀಟಿಸಿದರು.

"ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಗೌರವಿಸಿ. ಅವರಿಗೆ ರೂ. 4 ಲಕ್ಷ ಪರಿಹಾರವನ್ನು ನೀಡಬೇಕು" ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News