×
Ad

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಜೆಡಿಎಸ್ ಕೈವಶವಾಗಲಿದೆ: ಕುಮಾರಸ್ವಾಮಿ ವಿಶ್ವಾಸ

Update: 2022-05-06 20:33 IST

ಚನ್ನರಾಯಪಟ್ಟಣ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರವು ಜೆಡಿಎಸ್ ಪಕ್ಷದ ಕೈವಶ ವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಲಿದ್ದಾರೆ. 

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್ ಬಾಲಕೃಷ್ಣ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ಬಿಜೆಪಿ ನೇತೃತ್ವದ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ವ್ಯವಹಾರದಲ್ಲಿ ಮುಳುಗಿದೆ, ಅದೇ ರೀತಿ ಇತ್ತೀಚಿಗೆ ನಡೆದ ಹಲವಾರು ಇಲಾಖೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರದ ಮೂಲಕ ನೇಮಕಾತಿ ಮಾಡುತ್ತಿರುವುದು ದೊಡ್ಡ ಬ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ, ಉಪನ್ಯಾಸಕರ ನೇಮಕಾತಿ, ಪೊಲೀಸರ ನೇಮಕಾತಿ, ಸೇರಿದಂತೆ ಹಲವಾರು ಇಲಾಖೆಯಲ್ಲಿ ನೌಕರರ ನೇಮಕಾತಿಯಲ್ಲಿ ಭ್ರಷ್ಟಾಚಾರ ಮಾಡುವ ಮುಖೇನ ಇದೊಂದು ಭ್ರಷ್ಟಾಚಾರದ ಗುಂಪು ಎಂಬುದನ್ನು ಸಾಬೀತು ಮಾಡಿದೆ ಎಂದರು. 

'ಬಿಜೆಪಿ ಸರ್ಕಾರದ ಬ್ರಷ್ಟಾಚಾರವನ್ನು ನೋಡಿದ ಮತದಾರರು ಮುಂಬರುವ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ' ಎಂದು ಟೀಕೆ ಮಾಡಿದರು.

ಮುಂಬರುವ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ ಸ್ಪರ್ಧೆ ಮಾಡುವ ಮೂಲಕ ಜೆಡಿಎಸ್ ಪಕ್ಷದ ಕೈವಶ ಮಾಡಿಕೊಂಡು ಹಾಲಿ ಶಾಸಕ ಪ್ರೀತಮ್ ಗೌಡ ರಿಗೆ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಶ್ರವಣಬೆಳ ಕ್ಷೇತ್ರದ ಶಾಸಕರಾದ ಸಿಎನ್ ಬಾಲಕೃಷ್ಣ, ಜೆಡಿಎಸ್ ಮುಖಂಡ ಹೊಂಗೆರೆ ರಘು, ಜೆಡಿಎಸ್ ತಾಲೂಕ್ ಅಧ್ಯಕ್ಷ ಪರಮ ದೇವರಾಜೇಗೌಡ ಸೇರಿದಂತೆ ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News