×
Ad

ಮೇ 10ರಂದು ಕ್ರೈಂ ಫೈಲ್ ಪತ್ರಿಕೆಯ 10ನೆ ವಾರ್ಷಿಕೋತ್ಸವ

Update: 2022-05-06 21:04 IST

ಉಡುಪಿ : ಕ್ರೈಂ ಫೈಲ್ ಕನ್ನಡ ಪಾಕ್ಷಿಕ ಪತ್ರಿಕೆಯ ೧೦ ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಮೇ ೧೦ರಂದು ಸಂಜೆ ೪ ಗಂಟೆಗೆ ಅಜ್ಜರಕಾಡು ಟೌನ್‌ಹಾಲ್‌ನಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಯೋಜಕ ಎಂ.ಎನ್.ಕೊಟ್ಟಾರಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿರುವರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಎಸ್ಪಿ ಎನ್.ವಿಷ್ಣುವರ್ಧನ್, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‌ ಚಂದ್ರ ಶೆಟ್ಟಿ ಭಾಗವಹಿಸಲಿರುವರು. ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸ ಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಮಯ್ಯ ಯಕ್ಷ ಬಳಗ ಅರ್ಪಿಸುವ ತೆಂಕು-ಬಡಗು ಗಾನ ವೈಭವ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಹೆಬ್ರಿ ವರದಿಗಾರ ಶಶಿಧರ್ ಬಿ. ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News