ಮೇ 8, 9ರಂದು ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್
ಉಡುಪಿ : ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಆಸೋಸಿಯೇಶನ್ ವತಿಯಿಂದ ಕರ್ನಾಟಕ ರಾಜ್ಯ ಹಿರಿಯರ ಮತ್ತು ೨೦ ವಯೋಮಿತಿಯ ಪುರುಷ ಹಾಗೂ ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಮೇ ೮ ಮತ್ತು ೯ ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ
ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರೀಡಾಕೂಟ ಸಂಘ ಟನಾ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್, ಈ ಕ್ರೀಡಾಕೂಟದಲ್ಲಿ ಸುಮಾರು ೭೫೦ ಮಂದಿ ಕ್ರೀಡಾಪಟುಗಳು, ೭೫ ಜನ ಅಧಿಕಾರಿಗಳು, ೫೦ ಮಂದಿ ಸ್ವಯಂ ಸೇವಕರು ಪಾಲ್ಗೊಳ್ಳಲಿರುವರು. ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಒಟ್ಟು ೮೦ ಸ್ಪರ್ಧೆಗಳು ನಡೆಯಲಿವೆ ಎಂದರು.
ಜೂ.೨ರಿಂದ ೪ರ ವರೆಗೆ ಗುಜರಾತ್‌ನಲ್ಲಿ ನಡೆಯುವ ೨೦ರ ವಯೋಮಿತಿಯ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಕರ್ನಾಟಕ ತಂಡದ ಆಯ್ಕೆಯು ನಡೆಯಲಿದೆ. ಜೂ. ೧೦ರಿಂದ ೧೪ರವರೆಗೆ ತಮಿಳುನಾಡಿನಲ್ಲಿ ನಡೆಯುವ ೬೦ನೆ ರಾಷ್ಟ್ರೀಯ ಹಿರಿಯಡ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ತಂಡದ ಆಯ್ಕೆಯು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಎಎಫ್‌ಐ, ಯುಐಡಿ ಮಾಡುವುದು ಕಡ್ಡಾಯವಾಗಿದೆ. ೨೦ರ ವಯೋಮಿತಿಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ ಜನನ ಪ್ರಮಾಣಪತ್ರ ನೀಡಬೇಕು. ರಾಷ್ಟ್ರೀಯ ಕ್ರೀಡಾಕೂಟಕ್ಕೆ ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ(ಎಎಫ್‌ಐ) ನಿಯಮಾನುಸಾರ ಕರ್ನಾಟಕ ತಂಡದ ಆಯ್ಕೆಯು ಜರಗಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ಗೌರವಾಧ್ಯಕ್ಷ ಬಾಲಕೃಷ್ಣ ಹೆಗ್ಡೆ, ಗೌರವ ಸಲಹೆಗಾರ ಅಶೋಕ್ ಅಡ್ಯಂತಾಯ, ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಕಾರ್ಯದರ್ಶಿ ದಿನೇಶ್ ಕುಮಾರ್, ಸದಸ್ಯ ಲಚ್ಚೇಂದ್ರ ಉಪಸ್ಥಿತರಿದ್ದರು.