ಸುಳ್ಯ : ಯುವತಿ ಆತ್ಮಹತ್ಯೆ
Update: 2022-05-07 10:05 IST
ಸುಳ್ಯ : ನೇಣು ಬಿಗಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ.
ಸುಳ್ಯ ಗಾಂಧಿನಗರ ಕೆರೆಮೂಲೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿವಿದ್ದ ಆಮಿನಾ ಎಂಬವರ ಪುತ್ರಿ ಆಯಿಶಾ (20) ಮೃತ ಯುವತಿ ಎಂದು ತಿಳಿದುಬಂದಿದೆ.
ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ಈಕೆಯನ್ನು ನೋಡಿದ ಮನೆಯವರು ಕೂಡಲೇ ಕೆಳಗಿಳಿಸಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರು. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿದಾಗ ಆಕೆ ಮೃತಪಟ್ಟಿರುವುದಾಗಿ ತಿಳಿಸಿದರೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಆಯಿಶಾರನ್ನು ಮಂಙಪಾರೆಯ ಯುವಕನೊಂದಿಗೆ ವಿವಾಹ ಮಾಡಿಕೊಡಲಾಗಿದ್ದು, ಪತಿ ವಿದೇಶದಲ್ಲಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸುಳ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.