ಹಾಸ್ಯ ನಟ ಮೋಹನ್ ಜುನೇಜ ನಿಧನ
Update: 2022-05-07 10:43 IST
ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ಕಲಾವಿದ ಮೋಹನ್ ಜುನೇಜ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.
ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಹಾಸ್ಯ ಕಲಾವಿದ ಮೋಹನ್ ಜುನೇಜ ಅವರು ಕೆಜಿಎಫ್ ಸಹಿತ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಮೋಹನ್ ಅವರು ಪತ್ನಿ ಕುಸುಮಾ ಮತ್ತು ಇಬ್ಬರು ಮಕ್ಕಳಾದ ಅಕ್ಷಯ್ ಮತ್ತು ಅಶ್ವಿನ್ ಅವರನ್ನು ಅಗಲಿದ್ದಾರೆ.
ಮೋಹನ್ ಅವರ ಕಿರಿಯ ಪುತ್ರ ಅಕ್ಷಯ್ ಗೆ ಛಾಯಾಗ್ರಹಣದಲ್ಲಿ ಆಸಕ್ತಿ ಹೆಚ್ಚಿದೆ. ಹಿರಿಯ ಪುತ್ರ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ.