ಬೆಂಗಳೂರು : ಬಸವ ಜಯಂತಿ ಸಮಾರಂಭ; ಬಸವಶ್ರೀ-ವಚನ ಸಾಹಿತ್ಯ ಪ್ರಶಸ್ತಿ ಪ್ರದಾನ

Update: 2022-05-07 06:57 GMT

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಬಸವ ವೇದಿಕೆಯಲ್ಲಿ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಬಸವಶ್ರೀ ಮತ್ತು ವಚನ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಕುಲಪತಿ ಪದ್ಮಶ್ರೀ ಡಾ. ನಾಗೇಂದ್ರ ಅವರಿಗೆ ಬಸವಶ್ರೀ ಪ್ರಶಸ್ತಿ ಹಾಗೂ ಬೀದರನ ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕಾ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಈ ಸಂದರ್ಭ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಹ್ಲಾದ ಜೋಷಿ, ವಸತಿ ಸಚಿವ ವಿ ಸೋಮಣ್ಣ, ಮೈಸೂರಿನ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ,  ಬಸವ ವೇದಿಕೆ ಅಧ್ಯಕ್ಷ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್, ಅಂಕಣಕಾರ ಕೆ. ಷಡಕ್ಷರಿ ಮತ್ತು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News