ವಸತಿ ಶಾಲೆಗಳಲ್ಲಿ ದಾಖಲಾತಿ: ಅರ್ಜಿ ಆಹ್ವಾನ
Update: 2022-05-07 21:10 IST
ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ೭, ೮ ಮತ್ತು ೯ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ ೧೫ ಕೊನೆಯ ದಿನ. ಪ್ರವೇಶ ಪರೀಕ್ಷೆಯು ಮೇ ೨೨ ರಂದು ಬ್ರಹ್ಮಾವರದ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಲಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ವಸತಿ ಶಾಲೆಗಳನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.