ರಾಜ್ಯದಲ್ಲಿ ಶನಿವಾರ 171 ಕೊರೋನ ಪ್ರಕರಣ ದೃಢ

Update: 2022-05-07 16:32 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು, ಮೇ 7: ರಾಜ್ಯದಲ್ಲಿ ಶನಿವಾರ 171 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 121 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,48,635ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,061ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,945ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.   

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 171 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 155, ಬೀದರ್ 1, ದಕ್ಷಿಣ ಕನ್ನಡ 2, ಧಾರವಾಡ 1, ಮೈಸೂರು 10, ಉಡುಪಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News