ಮಡಿಕೇರಿ| ಕೆತ್ತನೆ ಮಾಡಿದ್ದ ಆನೆ ದಂತ ಮಾರಾಟ ಮಾಡಲು ಯತ್ನ: ಸಿಐಡಿ ಅರಣ್ಯ ಘಟಕದಿಂದ ಇಬ್ಬರು ಆರೋಪಿಗಳ ಬಂಧನ

Update: 2022-05-08 13:13 GMT

ಮಡಿಕೇರಿ ಮೇ 8 : ಆನೆ ದಂತದಲ್ಲಿ ಸುಂದರವಾಗಿ ಕೆತ್ತಲಾಗಿರುವ ಟ್ರೋಫಿ ಮಾದರಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ.

ರಫೀಕ್ ಅಹಮದ್ ಖಾನ್ ಹಾಗೂ ಫಾಜಿಲ್ ಖಾನ್ ಎಂಬುವವರೆ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಚೈನ್‍ಗೇಟ್ ಬಳಿಯಲ್ಲಿರುವ ಹಿಂದೂ ರುದ್ರಭೂಮಿಯ ಮುಂಭಾಗದ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಆನೆದಂತದ ಟ್ರೋಪಿಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ಇದನ್ನು ಆಧರಿಸಿ ಮಡಿಕೇರಿ ತಾಲ್ಲೂಕು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಬಂಧಿಸಿದರು. 

ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದ ಪ್ರಭಾರ ಅಧೀಕ್ಷಕ ಎನ್.ಟಿ.ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪ ನಿರೀಕ್ಷಕಿ ಸಿ.ಯು.ಸವಿ, ಸಿಬ್ಬಂದಿಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ, ಸ್ವಾಮಿ ಹಾಗೂ ಮಂಜುನಾಥ್ ಕಾರ್ಯಾಚರಣೆ ನಡೆಸಿದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News