×
Ad

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Update: 2022-05-08 21:23 IST

ಬೆಂಗಳೂರು, ಮೇ 8: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದ ಜನರು ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೇ, ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 9ರಿಂದ ಮೂರು ದಿನ ಭಾರೀ ಮಳೆ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವಂತ ವಾಯುಭಾರ ಕುಸಿತದ ಪರಿಣಾಮ ಬರಲಿದೆ. ಹಲವು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್ ಕೂಡ ಹವಾಮಾನ ಇಲಾಖೆ ಘೋಷಿಸಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ತುಮಕೂರು, ರಾಮನಗರ, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಜೊತೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News