ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ
Update: 2022-05-09 00:16 IST
ಶ್ರೀನಗರ,ಮೇ 8: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ರವಿವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ ಪಾಕಿಸ್ತಾನದ ಲಷ್ಕರೆ ತೈಬಾ ಭಯೋತ್ಪಾದಕ ಸೇರಿದಂತೆ ಇಬ್ಬರು ಉಗ್ರರು ಕೊಲ್ಲಲ್ಪಟ್ಟಿದ್ದಾರೆ.
ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದ ಭದ್ರತಾ ಪಡೆಗಳು ಚೆಯಾನ್ ದೇವಸರ್ ಪ್ರದೇಶದಲ್ಲಿ ಪ್ರವೇಶ ನಿರ್ಬಂಧಿಸಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ವಿನಿಮಯ ನಡೆದಿದ್ದು,ಹೈದರ್ ಎಂಬ ಪಾಕಿಸ್ತಾನಿ ಸೇರಿದಂತೆ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಕಾಶ್ಮೀರ ಐಜಿಪಿ ವಿಜಯ ಕುಮಾರ ತಿಳಿಸಿದರು.