ಬೆಂಗಳೂರು: ಮೆಟ್ರೋ ಕಂಬಕ್ಕೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ನಾಲ್ವರಿಗೆ ಗಂಭೀರ ಗಾಯ
Update: 2022-05-09 09:47 IST
ಬೆಂಗಳೂರು: ಮೆಟ್ರೋ ಕಂಬಕ್ಕೆ ಕೆಎಸ್ಸಾರ್ಟಿಸಿ ಬಸ್ ಒಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಗರದ ಕೆಂಗೇರಿ ಬಳಿ ನಡೆದಿದೆ.
ಮಡಿಕೇರಿಯಿಂದ ಬೆಂಗಳೂರಿಗೆ ಕಡೆ ಬರುತ್ತಿದ್ದಾಗ ರಾತ್ರಿ 1.30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ 25 ಜನರಿಗೆ ಗಾಯವಾಗಿದೆ. ಬಸ್ನಲ್ಲಿ ಒಟ್ಟು 45 ಮಂದಿ ಪ್ರಯಾಣ ಮಾಡುತ್ತಿದ್ದು, ಸದ್ಯ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.