×
Ad

ತೆಲಂಗಾಣ: ಟ್ರಕ್‌ಗೆ ಮಿನಿವ್ಯಾನ್ ಡಿಕ್ಕಿ; 8 ಮಂದಿ ಸಾವು, 20 ಜನರಿಗೆ ಗಾಯ

Update: 2022-05-09 10:34 IST

ಹೈದರಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ರವಿವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಹಾಗೂ  20 ಮಂದಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಿನಿವ್ಯಾನ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ನಿಝಾಮ್ ಸಾಗರ ವಲಯದ ಹಾಸನ್ ಪಲ್ಲಿ ಗೇಟ್‌ನಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಹಾಗೂ  ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್) ನಿಂದ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ 50,000 ರೂ. ಪ್ರಕಟಿಸಿದ್ದಾರೆ.

ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಟ್ಟು ಆರು ಮಹಿಳೆಯರು ದುರ್ಘಟನೆಗೆ ಬಲಿಯಾಗಿದ್ದಾರೆ.

ಮಿನಿವ್ಯಾನ್ ಚಾಲಕ ಯಲ್ಲರೆಡ್ಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟರೆ, ಇಬ್ಬರು ಗಾಯಾಳುಗಳು ಬಾನ್ಸವಾಡ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News