ಉತ್ತರ ಪ್ರದೇಶ: ಕ್ಲಿನಿಕ್‌ನಲ್ಲಿದ್ದ ವೈದ್ಯನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Update: 2022-05-09 05:29 GMT

ಲಕ್ನೊ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬುಲಂದ್‌ಶಹರ್ ನಗರದ ಗುಲಾಥಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಕೆಟ್‌ನಲ್ಲಿ ರವಿವಾರ ಅಪರಿಚಿತ ದುಷ್ಕರ್ಮಿಗಳು ವೈದ್ಯರೊಬ್ಬರನ್ನು ಅವರ ಕ್ಲಿನಿಕ್‌ನಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.

 ಡಾ. ಶಾದಾಬ್ ಎಂದು ಗುರುತಿಸಲಾದ ವೈದ್ಯರು ಕಳೆದ 16 ವರ್ಷಗಳಿಂದ ಚರ್ಮರೋಗ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಗಳು ತಿಳಿಸಿವೆ.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಬುಲಂದ್‌ಶಹರ್ ಎಸ್‌ಎಸ್‌ಪಿ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಡಾ. ಶಾದಾಬ್ ಅವರ ಕ್ಲಿನಿಕ್‌ಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ.  ದುಷ್ಕರ್ಮಿಗಳು ವೈದ್ಯರ ಮೇಲೆ ಸುಮಾರು 30 ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಶಾದಾಬ್‌ಗೆ 24 ಗುಂಡುಗಳು ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗುಂಡಿನ ಚಕಮಕಿಯ ನಂತರ ಮಾರುಕಟ್ಟೆಯಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. ಗುಂಡಿನ ದೊಡ್ಡ ಶಬ್ದ ಕೇಳಿದ ಜನರು ಕಿರುಚಿಕೊಂಡು ಓಡಲು ಆರಂಭಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News