ಸಿಎಂ ಬೊಮ್ಮಾಯಿ ಭೇಟಿಯಾದ ಕಾಂಗ್ರೆಸ್ ಅಲ್ಪಸಂಖ್ಯಾತ ಶಾಸಕರ ನಿಯೋಗ

Update: 2022-05-09 07:11 GMT

ಬೆಂಗಳೂರು, ಮೇ 9: ರಾಜ್ಯದಲ್ಲಿ ಅಝಾನ್ ಗೆ ವಿರೋಧ ವ್ಯಕ್ತಪಡಿಸಿ ಶ್ರೀ ರಾಮ ಸೇನೆ ಸೇರಿದಂತೆ ಕೆಲವೊಂದು ಹಿಂದುತ್ವ ಸಂಘಟನೆಗಳು ಭಜನೆ ಇತ್ಯಾದಿ ಮೂಲಕ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಶಾಸಕರ ನಿಯೋಗವೊಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಇಂದು ಭೇಟಿಯಾಗಿ ಚರ್ಚಿಸಿತು.

ಆರ್.ಟಿ.ನಗರದಲ್ಲಿರುವ ಸಿಎಂ ನಿವಾಸಕ್ಕೆ ವಿಪಕ್ಷ ಉಪನಾಯಕ ಯು.ಟಿ.ಖಾದರ್ ನೇತೃತ್ವದ ನಿಯೋಗ ಇಂದು ಬೆಳಗ್ಗೆ ಭೇಟಿ ನೀಡಿತು.

'ರಾಜ್ಯದಲ್ಲಿ ಬಹುತೇಕ ಎಲ್ಲ ಜನರು ಶಾಂತಿ, ಸೌಹಾರ್ದವನ್ನು ಬಯಸುತ್ತಾರೆ. ಕೆಲವೊಂದು ಶಕ್ತಿಗಳು ಕ್ಷುಲ್ಲಕ ವಿಚಾರನವನ್ನು ಮುಂದಿಟ್ಟು ಅಶಾಂತಿ ಉಂಟು ಮಾಡಲು ಯತ್ನಿಸುತ್ತಿವೆ. ಆದ್ದರಿಂದ ಸರಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇವೆ' ಎಂದು ಖಾದರ್ ತಿಳಿಸಿದ್ದಾರೆ.

ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಖಾದರ್ ಹೇಳಿದರು.

ನಿಯೋಗದಲ್ಲಿ ಶಾಸಕರಾದ ಎನ್.ಎ.ಹಾರಿಸ್, ನಝೀರ್ ಅಹ್ಮದ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News