ತೀವ್ರಗೊಳ್ಳುತ್ತಿರುವ ಬಿಕ್ಕಟ್ಟು, ಪ್ರತಿಭಟನೆ: ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ರಾಜೀನಾಮೆ
Update: 2022-05-09 16:41 IST
ಹೊಸದಿಲ್ಲಿ: ರಾಷ್ಟ್ರವ್ಯಾಪಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸ ಸೋಮವಾರ ರಾಜೀನಾಮೆ ನೀಡಿದ್ದಾರೆ. ಶ್ರೀಲಂಕಾದಲ್ಲಿ ಹೊಸ ಕ್ಯಾಬಿನೆಟ್ ರಚನೆಯಾಗಲಿದೆ.
ಶುಕ್ರವಾರ ನಡೆದ ವಿಶೇಷ ಸಭೆಯಲ್ಲಿ ಅಧ್ಯಕ್ಷ ಗೊಟಬಯಾ ರಾಜಪಕ್ಸ ಅವರು ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿಗೆ ಪರಿಹಾರವಾಗಿ ಅಧಿಕಾರದಿಂದ ಕೆಳಗಿಳಿಯುವಂತೆ ಪ್ರಧಾನಿಗೆ ಮನವಿ ಮಾಡಿದ ಕೆಲವು ದಿನಗಳ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶ್ರೀಲಂಕಾದ ಡೈಲಿ ಮಿರರ್ ವರದಿ ಮಾಡಿದೆ.
ಇದೀಗ ಪ್ರಧಾನಿ ರಾಜೀನಾಮೆ ನೀಡಿದ್ದು, ಅಧ್ಯಕ್ಷ ರಾಜಪಕ್ಸ ಅವರು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳನ್ನು ಸರ್ವಪಕ್ಷಗಳ ಸಂಪುಟ ರಚನೆಗೆ ಆಹ್ವಾನಿಸುವ ನಿರೀಕ್ಷೆಯಿದೆ.
ಈ ಹಿಂದೆ, ವಿರೋಧ ಪಕ್ಷ ಸಮಗಿ ಜನ ಬಲವೇಗಯ (ಎಸ್‌ಜೆಬಿ) ಅದರ ನಾಯಕ ಸಜಿತ್ ಪ್ರೇಮದಾಸ ಅವರು ಮಧ್ಯಂತರ ಸರ್ಕಾರದಲ್ಲಿ ಪ್ರಧಾನಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ದೃಢಪಡಿಸಿದ್ದರು.