ರಾಜ್ಯದಲ್ಲಿ ಸೋಮವಾರ 90 ಮಂದಿಗೆ ಕೊರೋನ ದೃಢ: ಓರ್ವ ಮೃತ್ಯು

Update: 2022-05-09 17:29 GMT

ಬೆಂಗಳೂರು, ಮೇ 9: ರಾಜ್ಯದಲ್ಲಿ ಸೋಮವಾರ 90 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬರು ಸಾವನ್ನಪ್ಪಿದ್ದು, 128 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,48,837ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,063ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,925ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 90 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ನಗರ 88, ದಕ್ಷಿಣ ಕನ್ನಡ 1, ಮೈಸೂರು ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಒಬ್ಬರ ಸಾವು: ಕಲಬುರಗಿ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 
   
ರಾಜಧಾನಿಯಲ್ಲಿ 88 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಸೋಮವಾರದಂದು 88 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,65,906 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,84,674 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News