ಸ್ಮಾರ್ಟ್ ರೋಡ್ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಚಾಲನೆ
Update: 2022-05-10 11:16 IST
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 55ನೇ ವಾರ್ಡಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಮಾರ್ನಮಿ ಕಟ್ಟೆಯಿಂದ ಕೋಟಿ ಚೆನ್ನಯ್ಯ ವೃತ್ತದ ವರೆಗಿನ ಸುಮಾರು 5 ಕೋಟಿ ರೂ.ಗಳ ವೆಚ್ಚದ ಚತುಷ್ಪತ ಸ್ಮಾರ್ಟ್ ರಸ್ತೆ ನಿರ್ಮಾಣಕ್ಕೆ ಶಾಸಕರಾದ ವೇದವ್ಯಾಸ್ ಕಾಮತ್ ಇಂದು ಚಾಲನೆ ನೀಡಿದರು.
ಈ ಸಂದರ್ಭ ಮಂಗಳೂರು ಮಹಾ ಪೌರರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಸ್ಥಳಿಯ ಕಾರ್ಪೋರೆಟರ್ ಶೈಲೇಶ್ ಶೆಟ್ಟಿ, ಇತರ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳಿಯ ಜನ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.