×
Ad

ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಜೂನ್‌ 3ರಂದು ಚುನಾವಣೆ

Update: 2022-05-10 13:33 IST
ಫೈಲ್ ಚಿತ್ರ- ವಿಧಾನ ಪರಿಷತ್‌

‌ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್‌ 14ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ.

ಬಿಜೆಪಿಯ ಮಾಜಿ ಸಚಿವ ಲಕ್ಷ್ಮಣ್ ಸವದಿ, ಲಹರ್‌ ಸಿಂಗ್‌ ಸಿರೋಯಾ, ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪೂರ್, ಅಲ್ಲಂ ವೀರಭದ್ರಪ್ಪ ಹಾಗೂ ವೀಣಾ ಅಚ್ಚಯ್ಯ, ಜೆಡಿಎಸ್‌ ನ ಕೆ.ವಿ. ನಾರಾಯಣ ಸ್ವಾಮಿ ಮತ್ತು ಎಚ್‌.ಎಂ. ರಮೇಶ್‌ ಗೌಡ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ ಎಂದು ಆಯೋಗದ ಪ್ರಕಟನೆಯಲ್ಲಿ ತಿಳಿಸಿದೆ.

ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ. ಜೂನ್‌ 3ರಂದು ಚುನಾವಣೆ ನಡೆಯಲಿದ್ದು, ಮೇ 17ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 24 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮೇ 25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.  ಮೇ 27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ಎಂದು ಚುನಾವಣಾ ಆಯೋಗ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News