ಎಂ.ಬಿ. ಪಾಟೀಲ್ ಅವರನ್ನು ಭೇಟಿ ಆಗಿಲ್ಲ, ಅದರ ಅಗತ್ಯವೂ ನನಗಿಲ್ಲ: ಸಚಿವ ಅಶ್ವತ್ಥ್ ನಾರಾಯಣ
ಬೆಂಗಳೂರು: 'ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ನಾನು ಭೇಟಿ ಆಗಿಲ್ಲ. ಅದರ ಅಗತ್ಯವೂ ಇಲ್ಲ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಸ್ಪಷ್ಟನೆ ನೀಡಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ನೂರು ಜನ್ಮ ಹುಟ್ಟಿ ಬಂದರೂ ನನ್ನ ಮುಖಕ್ಕೆ ಮಸಿ ಬಳಿಯಲು ಆಗದು. ಸದ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಾನು ಆ ರೇಸ್ ನಲ್ಲೂ ಇಲ್ಲ. ಪಕ್ಷದಲ್ಲಿ ಯಾರೂ ನನಗೆ ವಿರೋಧಿಗಳಿಲ್ಲ. ಇದೆಲ್ಲ ವಿರೋಧ ಪಕ್ಷಗಳ ಕುತಂತ್ರ ಅಷ್ಟೇ ಎಂದರು.ಭೇಟಿ ಆಗಿಲ್ಲ.
ಸದ್ಯ ಜಾಮೀನು ಮೇಲೆ ಬಂದಿರುವ ಜೈಲು ಹಕ್ಕಿಗೆ ತಿಹಾರ್ ಖಾಯಂ ವಿಳಾಸ ಆಗಬೇಕಿತ್ತು.' ಶಿವಕುಮಾರ್ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದರೆ ಶಿವಕುಮಾರ್ ಎಂದು ಹೇಳಿದ್ದಾರೆ.
'ಅಶ್ವತ್ಥ್ ನಾರಾಯಣ ಅವರು ಅಕ್ರಮ ಪ್ರಕರಣದಿಂದ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಎಂ.ಬಿ ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಕಾಂಗ್ರೆಸ್ ಪಾರ್ಟಿಯವರು ಧ್ವನಿ ಎತ್ತಬಾರದು ಅಂತ ಹೇಳಿ ಮನವೊಲಿಸುವುದಕ್ಕಾಗಿ ಭೇಟಿಯಾಗಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆಗೆ ಇದೀ ಅಶ್ವತ್ಥ್ ನಾರಾಯಣ ಅವರು ಪ್ರತಿಕ್ರಿಯಿಸಿದ್ದಾರೆ.