×
Ad

ಮಂಗಳೂರು: ಮುಂದಿನ ಚುನಾವಣೆಗೆ ಕಾರ್ಯಪ್ರವೃತ್ತರಾಗಲು ಡಿಸಿಸಿ ಅಧ್ಯಕ್ಷ ಕರೆ

Update: 2022-05-10 19:36 IST

ಮಂಗಳೂರು : ಬಿಜೆಪಿ ಸರಕಾರದ ವೈಫಲ್ಯಗಳು ಹಾಗೂ ಭ್ರಷ್ಟಾಚಾರಗಳ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಭ್ರಮನಿರಸಗೊಂಡಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳುವಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕರೆ ನೀಡಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಜರಗಿದ ದ.ಕ.ಜಿಲ್ಲಾ ಕಾಂಗ್ರೆಸ್ ಪಕ್ಷದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪಕ್ಷದ ಮುಖಂಡರಾದ ಮುಸ್ತಾಕ್ ಅಹ್ಮದ್, ಇದ್ದಿಕುಂಞಿ, ಕಮಲಾಕ್ಷ ರೈ, ಮೇಘನಾದಾಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಮಮತಾ ಗಟ್ಟಿ, ಧನಂಜಯ ಅಡ್ಪಂಗಾಯ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಕ್ಷದ ಪದಾಧಿಕಾರಿಗಳಾದ ಯು.ಎಚ್.ಖಾಲಿದ್ ಉಜಿರೆ, ನೀರಜ್‌ಪಾಲ್, ಸಲೀಂ ಪಾಂಡೇಶ್ವರ, ಸಿ.ಎಂ.ಮುಸ್ತಫಾ, ಶುಭೋದಯ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News