×
Ad

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

Update: 2022-05-10 20:30 IST

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಗೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ ೨೦೧೮-೧೯ ಮತ್ತು ೨೦೧೯-೨೦ ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. 

ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ಧಿ ಮತ್ತು ಮೀನುಗಾರಿಕೆ ನಿರ್ವಹಣೆ ಹಾಗೂ ನಿಯಂತ್ರಣ ವಿಧಿಗಳ ಅಭಿವೃದ್ಧಿ ಕಾರ್ಯಗಳ ವಿವಿಧ ಘಟಕಗಳಿಗೆ ಆರ್ಥಿಕ ಸೌಲಭ್ಯ ಪಡೆಯಲು ಮೇ ೩೧ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News