ವಿದೇಶಿ ದೇಣಿಗೆ ನಿಯಮ ಉಲ್ಲಂಘನೆ ಪ್ರಕರಣ: ಎನ್‌ಜಿಒಗಳ ವಿರುದ್ಧ ಮೈಸೂರು ಸಹಿತ 40 ಸ್ಥಳಗಳಲ್ಲಿ ಸಿಬಿಐ ದಾಳಿ

Update: 2022-05-10 18:21 GMT

ಹೊಸದಿಲ್ಲಿ, ಮೇ 10: ವಿದೇಶಿ ದೇಣಿಗೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಸಹಿತ 40 ಸ್ಥಳಗಳಲ್ಲಿ ಸರಕಾರೇತರ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ವಿದೇಶಿ ದೇಣಿಗೆ ಪಡೆಯುವ ನಿಯಮಗಳನ್ನು ಉಲ್ಲಂಘಿಸಲು ಸರಕಾರೇತರ ಸಂಸ್ಥೆಗಳಿಗೆ ಅನುವು ಮಾಡಿಕೊಡುವ ಉದ್ದೇಶಕ್ಕಾಗಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಐವರು ಸರಕಾರಿ ಅಧಿಕಾರಿಗಳು ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಲಂಚ ಪಡೆದುಕೊಂಡು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ)ಯ ನಿಯಮಗಳನ್ನು ಉಲ್ಲಂಘಿಸಲು ಎನ್‌ಜಿಒಗಳಿಗೆ ಅನುವು ಮಾಡಿಕೊಟ್ಟಿರುವುದಾಗಿ ಸಿಬಿಐ ಮೂಲಗಳು ತಿಳಿಸಿವೆ. ವಿದೇಶಿ ದೇಣಿಗೆ ಸ್ವೀಕರಿಸಲು ಅನುಮತಿ ನೀಡಲು ಲಂಚ ಪಡೆದುಕೊಳ್ಳುತ್ತಿರುವಾಗ ಗೃಹ ಸಚಿವಾಲಯದ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಹಾಗೂ ಮಧ್ಯವರ್ತಿಗಳನ್ನು ರೆಡ್ ಹ್ಯಾಂಟ್ ಆಗಿ ಹಿಡಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.

 ದಿಲ್ಲಿ, ರಾಜಸ್ಥಾನ, ಚೆನ್ನೈ, ಮೈಸೂರು ಹಾಗೂ ಇತರೆಡೆ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಹವಾಲ ಮೂಲಕ ಸುಮಾರು 2 ಕೋಟಿ ರೂಪಾಯಿಯನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಸಿಬಿಐ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News