ರಾಜ್ಯದಲ್ಲಿ ಮಂಗಳವಾರ 129 ಮಂದಿಗೆ ಕೊರೋನ ದೃಢ: ಸಾವಿನ ಸಂಖ್ಯೆ ಶೂನ್ಯ

Update: 2022-05-10 18:42 GMT

ಬೆಂಗಳೂರು, ಮೇ 10: ರಾಜ್ಯದಲ್ಲಿ ಮಂಗಳವಾರ 129 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 128 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,48,966ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,063ಕ್ಕೆ ತಲುಪಿದೆ.       
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,926ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.   

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 129 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 1, ಬೆಂಗಳೂರು ನಗರ 121, ಚಿತ್ರದುರ್ಗ 1, ದಕ್ಷಿಣ ಕನ್ನಡ 2, ಹಾಸನ 1, ಮೈಸೂರು 2, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. 
   

ರಾಜಧಾನಿಯಲ್ಲಿ 121 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಮಂಗಳವಾರದಂದು 121 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಟ್ಟು 17,66,030 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,84,795 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News