ಆತ್ಮಹತ್ಯೆಗೆ ಶರಣಾದ ಮಧ್ಯಪ್ರದೇಶ ಶಿಕ್ಷಣ ಸಚಿವರ ಸೊಸೆ

Update: 2022-05-11 11:56 GMT
ಸಾಂದರ್ಭಿಕ ಚಿತ್ರ/ಪಿಟಿಐ

ಭೋಪಾಲ್:‌ ಮಧ್ಯಪ್ರದೇಶ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಶಾಜಾಪುರ ಜಿಲ್ಲೆಯ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು thePrint ವರದಿ ಮಾಡಿದೆ.

ಸಚಿವರ ಪುತ್ರ ದೇವರಾಜ್ ಪರ್ಮಾರ್ ಅವರ ಪತ್ನಿ ಸವಿತಾ ಪರ್ಮಾರ್ (22) ಅವರು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಪೋಚನೇರ್ ಗ್ರಾಮದ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವಂತಿಪುರ ಬಡೋಡಿಯಾ ಪೊಲೀಸ್ ಠಾಣೆಯ ಉಸ್ತುವಾರಿ ಪ್ರದೀಪ್ ವಾಸ್ಕಲೆ ಬುಧವಾರ ಹೇಳಿದ್ದಾರೆ. ಆತ್ಮಹತ್ಯೆಯ ಹಿಂದಿನ ಕಾರಣ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಬುಧವಾರ ಬೆಳಗ್ಗೆ ಶವಪರೀಕ್ಷೆ ಬಳಿಕ ಮಹಿಳೆಯ ಅಂತಿಮ ಸಂಸ್ಕಾರವನ್ನು ಪೋಚನೇರ್ ಗ್ರಾಮದಲ್ಲಿ ನಡೆಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News