×
Ad

ನಾನು ಈಗ ಗೃಹ ಖಾತೆಯಲ್ಲಿ ಎಕ್ಸ್ ಪರ್ಟ್ ಆಗಿದ್ದೇನೆ: ಸಚಿವ ಆರಗ ಜ್ಞಾನೇಂದ್ರ

Update: 2022-05-11 18:50 IST

ಬೆಂಗಳೂರು: ‘ನನಗೆ ಈ ಖಾತೆ ಸಾಕು ಅನ್ನಿಸಿಲ್ಲ. ನಾನು ಇದೀಗ ಗೃಹ ಖಾತೆಯಲ್ಲಿ  ಎಕ್ಸ್ ಪರ್ಟ್  ಆಗಿದ್ದೇನೆ' ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಸಂಪುಟ ಪುನಾರಚನೆ, ವಿಸ್ತರಣೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬದಲಾಗುತ್ತಾರೆಂಬುದೂ ನನಗೆ ಗೊತ್ತಿಲ್ಲ. ಅದು ಪಕ್ಷದ ಆಂತರಿಕ ವಿಚಾರ. ನಾನು ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ಚುನಾವಣಾ ವರ್ಷ ಬರುತ್ತಿದೆ. ಎಲ್ಲ ಪಕ್ಷಗಳು ಸಿದ್ಧವಾಗಿರಬೇಕು. ಅದರ ಹಿನ್ನೆಲೆಯಲ್ಲಿ ಅನೇಕ ಸಂಗತಿಗಳು ಚರ್ಚೆಗೆ ಬಂದಿವೆ ಎಂದು ಹೇಳಿದರು. 

'ಶಬ್ದಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದೆ. ಮಾಧ್ಯಮಗಳ ಮೂಲಕವೂ ವ್ಯಾಪಕ ಪ್ರಚಾರವೂ ಆಗಿದೆ. ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕಗಳ ಉಪಯೋಗಕ್ಕೆ ಅವಕಾಶವಿಲ್ಲ' ಎಂದು ಸಚಿವರು  ಸ್ಪಷ್ಟಪಡಿಸಿದರು. 

ಇದನ್ನೂ ಓದಿ... ಸಂಪುಟ ಪುನಾರಚನೆ | ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು: ಮುಖ್ಯಮಂತ್ರಿ ಬೊಮ್ಮಾಯಿ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News