ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ಆರೋಪ: ಮಹಿಳೆ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Update: 2022-05-11 13:28 GMT

ಬೆಂಗಳೂರು, ಮೇ 11: ಪರಿಶಿಷ್ಟ ಪಂಗಡಕ್ಕೆ ಸೇರಿದ್ದೇನೆ ಎಂದು ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಸರಕಾರಿ ಉದ್ಯೋಗ ಪಡೆದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದು ಕೋರಿ ಮತ್ತಿಕೆರೆ ನಿವಾಸಿ ಸಾವಿತ್ರಿ(68) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ. ಇದರಿಂದ, ಸರಕಾರಿ ನೌಕರಿಯಿಂದ ವಜಾಗೊಂಡ 10 ವರ್ಷಗಳ ಬಳಿಕ ಅರ್ಜಿದಾರರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಂಡಂತಾಗಿದೆ.

ಉದ್ಯೋಗಕ್ಕೆ ಸೇರಿದ ಸಂದರ್ಭದಲ್ಲಿ ಜಾತಿಯಲ್ಲಿ ಇಲ್ಲದ ಕಾನೂನಿನ ಆಧಾರದಲ್ಲಿ ಅವರನ್ನು ಶಿಕ್ಷಿಸಲಾಗದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಬ್ರಾಹ್ಮಣ ಜಾತಿಗೆ ಸೇರಿದ್ದ ಅರ್ಜಿದಾರ ಮಹಿಳೆ, ಪರಿಶಿಷ್ಟ ಪಂಗಡದ ನಾಯಕ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಮದುವೆಯಾಗಿದ್ದರು. ಬಳಿಕ ಎಸ್‍ಟಿ ಜಾತಿ ಪ್ರಮಾಣಪತ್ರ ಪಡೆದು, ಎಸ್‍ಡಿಎ ಉದ್ಯೋಗ ಪಡೆದಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News