ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2022-05-11 16:51 GMT

ಹೆಬ್ರಿ : ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಬಂಟರ ಭವನದ ಎದುರುಗಡೆ ಮೇ 10ರಂದು ರಾತ್ರಿ ನಡೆದಿದೆ.

ಮೃತರನ್ನು ಆನಂದ (50) ಎಂದು ಗುರುತಿಸಲಾಗಿದೆ. ಹೆಬ್ರಿ ಸಂಬಂಧಿಕರ ಮನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ  ಹೆಬ್ರಿಯಿಂದ ನಡೆದುಕೊಂಡು ಹೋಗುತ್ತಿದ್ದ ಆನಂದ ಅವರಿಗೆ ಅಪರಿಚಿತ ವಾಹನವನ್ನು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡ ಆನಂದ, ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೇ 11ರಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News