ಮರು ಮದುವೆಯಾಗುವ ವಿಧವೆಯರಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

Update: 2022-05-11 16:54 GMT

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ಮದುವೆಯಾಗುವ ಪರಿಶಿಷ್ಟ ಜಾತಿಯ ವಿಧವೆಯರಿಗೆ 3 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡುವ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಅರ್ಜಿಯನ್ನು ಒಂದು ವಾರದ ಒಳಗೆ ಇಲಾಖಾ ವೆಬ್‌ಸೈಟ್ -www.sw.kar.nic.in- ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: ೦೮೨೦-೨೫೭೪೮೯೨ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News