ದೇವದಾಸಿ ಮಕ್ಕಳ ವಿವಾಹಕ್ಕೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

Update: 2022-05-11 16:55 GMT

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗುರುತಿಸಲ್ಪಟ್ಟ ಪರಿಶಿಷ್ಟ ಜಾತಿಯ ದೇವದಾಸಿಯರ ಗಂಡು ಮಕ್ಕಳು ಸ್ವ-ಜಾತಿ ಅಥವಾ ಇತರೆ ಜಾತಿಯ ಹುಡುಗಿಯನ್ನು ವಿವಾಹವಾದಲ್ಲಿ 3 ಲಕ್ಷ ರೂ. ಹಾಗೂ ಹೆಣ್ಣುಮಕ್ಕಳು ಸ್ವ-ಜಾತಿ ಅಥವಾ ಇತರೆ ಜಾತಿಯ ಹುಡುಗನನ್ನು ವಿವಾಹವಾದಲ್ಲಿ 5 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹ ಫಲಾಪೇಕ್ಷಿ ಗಳಿಂದ ಅರ್ಜಿಗಲನ್ನು ಆಹ್ವಾನಿಸಲಾಗಿದೆ.   

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಇಲಾಖಾ ವೆಬ್‌ಸೈಟ್  - www.sw.kar.nic.in- ಅಥವಾ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News