×
Ad

ಯಾವುದೇ ಚುನಾವಣೆ ಬಂದರೂ ಎದುರಿಸಲು ಬಿಜೆಪಿ ಸಿದ್ಧವಾಗಿದೆ: ನಳಿನ್ ಕುಮಾರ್ ಕಟೀಲ್

Update: 2022-05-11 22:40 IST

ಮಂಗಳೂರು : ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಗಳ ಚುನಾವಣೆ ಗೆ ಸಂಬಂಧಿಸಿದಂತೆ ನೀಡಿದ ತೀರ್ಪು ಅನ್ವಯ ವಾಗುತ್ತದೆ. ಆದರೆ ರಾಜ್ಯದಲ್ಲಿ ಒಬಿಸಿ ಮೀಸಲಾತಿ ಶೇ33ನ್ನು ನಿಗದಿ ಪಡಿಸಿ ಚುನಾವಣೆ ನಡೆಸಲು ಯಾವುದೇ ಸಮಸ್ಯೆ ಇಲ್ಲ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧ ವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯ ದ ತೀರ್ಪೀನ ಪ್ರಕಾರ ರಾಜ್ಯದಲ್ಲಿ ಬಿಬಿಎಂಪಿ, ಜಿ.ಪಂ, ತಾ.ಪಂಚಾಯತ್ ಚುನಾವಣೆ ನಡೆಸಲು ಮೀಸಲಾತಿ ನಿಗದಿ ಪಡಿಸಲು ಗೊಂದಲವಿಲ್ಲ ರಾಜ್ಯ ದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಆ ಕಾರಣದಿಂದ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಪಕ್ಷದ ಸಂಘಟನೆ ಗಾಗಿ ಪೇಜ್ ಪ್ರಮುಖ್, ಪಂಚರತ್ನ ಮತ್ತು ಪೇಜ್ ಕಮಿಟಿ ಯನ್ನು ಮತದಾನ ಕೇಂದ್ರ ಮಟ್ಟದಲ್ಲಿ ಬಿಜೆಪಿ ಸಂಘಟಿಸಿದೆ. ಪಕ್ಷದ ಬಲವರ್ಧನೆಗೆ ಬಿಜೆಪಿ ಮುಖಂಡರ 3ತಂಡ ರಾಜ್ಯ ಪ್ರವಾಸ ಪೂರ್ಣ ಗೊಳಿಸಿದೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ದಂತೆ ತನಿಖೆ ನಡೆಯುತ್ತಿದೆ. ಅಕ್ರಮ ದಲ್ಲಿ ಭಾಗಿಯಾಗಿರುವ ವ್ಯಕ್ತಿ ಯಾರೇ ಆಗಿದ್ದರೂ ಅವರ ವಿರುದ್ಧ ಕ್ರಮ ಜರುಗಲಿದೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ವಕ್ತಾರ ರಾಧಾಕೃಷ್ಣ ,ಉಪಾಧ್ಯಕ್ಷೆ ಕಸ್ತೂರಿ ಪಂಜ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News