ವಕ್ಫ್ ಆಸ್ತಿಗಳ ಸಮೀಕ್ಷೆಗೆ 2.5 ಕೋಟಿ ಬಿಡುಗಡೆ: ಶಾಫಿ ಸಅದಿ

Update: 2022-05-12 13:56 GMT

ಬೆಂಗಳೂರು, ಮೇ 12: ರಾಜ್ಯ ವ್ಯಾಪಿ ವಕ್ಫ್ ಆಸ್ತಿಗಳನ್ನು ಡ್ರೋನ್ ಮೂಲಕ ಸಮೀಕ್ಷೆ, ಆಸ್ತಿಗಳ ನಕ್ಷೆಯನ್ನು ಸಿದ್ಧಪಡಿಸಿ ಸಂರಕ್ಷಿಸಲು ಸರಕಾರದ ವತಿಯಿಂದ 2.5 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ತಿಳಿಸಿದ್ದಾರೆ.

ಗುರುವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯೂ ರಾಜ್ಯದ ಮುಸ್ಲಿಮ್ ಸಮುದಾಯದ ಬಹು ದಿನಗಳ ಬೇಡಿಕೆಯಾಗಿತ್ತು. ಅಲ್ಲದೆ, ವಕ್ಫ್ಪ್ ಸ್ವತ್ತಿನ ಸರ್ವೇ ನಡೆಸಬೇಕೆಂದು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿದ ಅವರು, ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23ನೆ ಸಾಲಿನ ಬಜೆಟ್ ಭಾಷಣದಲ್ಲಿ ವಕ್ಫ್ ಆಸ್ತಿಗಳನ್ನು ಡ್ರೋನ್ ಮೂಲಕ ಸರ್ವೆ ಮಾಡಿಸುವುದಾಗಿ ಘೋಷಿಸಿದ್ದರು. ಅಲ್ಲದೆ, ಇದ್ಕಕಾಗಿ ಅನುದಾನವನ್ನು ಮೀಸಲಿರಿಸಿದ್ದರು.ಅದರಂತೆ, ಶೀಘ್ರದಲ್ಲೆ ರಾಜ್ಯದಲ್ಲಿ ಡ್ರೋನ್ ಮೂಲಕ ವಕ್ಫ್ ಆಸ್ತಿಗಳ ಸಮೀಕ್ಷೆ ಕಾರ್ಯ ಆರಂಭಿಸಲಾಗುವುದು ಎಂದರು.

ರಾಜ್ಯದ ವಕ್ಫ್ ಅಧಿಕಾರಿಗಳು ಹಾಗೂ ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರೊಂದಿಗೆ ಸಮಾಲೋಚನೆ ನಡೆಸಿ, ವಕ್ಫ್ ಆಸ್ತಿಗಳ ಸಮೀಕ್ಷೆ ಕಾರ್ಯ ಯಾವ ರೀತಿ ನಡೆಸಬೇಕೆಂಬುದರ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News