ಜೂನ್ 10 ರಂದು ರಾಜ್ಯ ಸಭೆಯ 57 ಸ್ಥಾನಗಳಿಗೆ ಚುನಾವಣೆ

Update: 2022-05-12 16:43 GMT

ಹೊಸದಿಲ್ಲಿ, ಮೇ 12: ಹದಿನೈದು ರಾಜ್ಯಗಳ 52 ರಾಜ್ಯ ಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಉತ್ತರಪ್ರದೇಶದಲ್ಲಿ ಅತ್ಯಧಿಕ 11 ಸ್ಥಾನಗಳಿಗೆ ಚುನಾವಣೆ ನಡೆಯಲಿವೆ.

ಅನಂತರ ಅತಿ ಹೆಚ್ಚು ಸ್ಥಾನಗಳಿರುವ ರಾಜ್ಯಗಳೆಂದರೆ ಮಹಾರಾಷ್ಟ್ರ ಹಾಗೂ ತಮಿಳುನಾಡು. ಈ ರಾಜ್ಯಗಳಲ್ಲಿ ತಲಾ 6 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯ ಸಭೆ ಚುನಾವಣೆ ನಡೆಯಲಿರುವ ಇತರ ರಾಜ್ಯಗಳಲ್ಲಿ ಆಂಧ್ರಪ್ರದೇಶ ತೆಲಂಗಾಣ, ಚತ್ತೀಸ್ಗಢ, ಮಧ್ಯಪ್ರದೇಶ, ಕರ್ನಾಟಕ, ಒಡಿಶಾ, ಪಂಜಾಬ್, ರಾಜಸ್ಥಾನ, ಉತ್ತರಾಖಂಡ, ಬಿಹಾರ್, ಜಾರ್ಖಂಡ್ ಹಾಗೂ ಹರ್ಯಾಣ ಸೇರಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News