ಉಡುಪಿಯಲ್ಲಿ ಕೇಂದ್ರ ವಿತ್ತ ಸಚಿವೆ ಪ್ರವಾಸ

Update: 2022-05-13 15:39 GMT

ಉಡುಪಿ : ಕೇಂದ್ರ ಹಣಕಾಸು ಸಚಿವೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೇ 14ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ ೧೩ರಂದು ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿರುವ ಸಚಿವೆ, ಮೇ ೧೪ರಂದು ಬೆಳಗ್ಗೆ ೬ ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ, ೯:೧೫ಕ್ಕೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ, ಅಪರಾಹ್ನ ೨:೩೦ಕ್ಕೆ ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನದಲ್ಲಿ ವಿಸ್ತರಿತ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಟ್ಯಾಪ್ಮಿಯ ೩೬ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಅವರು ಮಂಗಳೂರಿಗೆ ತೆರಳುವರು.  

ಶೋಭಾ ಕರಂದ್ಲಾಜೆ ಪ್ರವಾಸ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಮೇ ೧೪ರಂದು ಉಡುಪಿಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳಲಿರುವರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News