ಉಡುಪಿ: ವರ್ಷಗಳ ಹಿಂದೆ ದಫನ ಮಾಡಿದ್ದ ಪಂಜಾಬ್ ನ ವ್ಯಕ್ತಿಯ ಮೃತದೇಹ ಹೊರತೆಗೆದ ಪೊಲೀಸರು!

Update: 2022-05-14 07:40 GMT

ಮಲ್ಪೆ, ಮೇ 14: ಒಂದೂವರೆ ವರ್ಷಗಳ ಹಿಂದೆ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಧಪನ ಮಾಡಲಾದ ಪಂಜಾಬ್ ಮೂಲದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೆಚ್ಚಿನ ತನಿಖೆಗಾಗಿ ಪಂಜಾಬ್ ಪೊಲೀಸರ ಸಮ್ಮುಖದಲ್ಲಿ ಇಂದು ಹೊರತೆಗೆಯುತ್ತಿರುವ ಬಗ್ಗೆ ವರದಿಯಾಗಿದೆ.

ಪಂಜಾಬ್ ರಾಜ್ಯದಲ್ಲಿ ನಾಪತ್ತೆಯಾದ ಈ ವ್ಯಕ್ತಿ ಒಂದೂವರೆ ವರ್ಷಗಳ ಹಿಂದೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟಿದ್ದರು. ಆದರೆ ಯಾರು ಕೂಡ ವಾರಸುದಾರರು ಸಂಪರ್ಕಿಸದ ಕಾರಣಕ್ಕಾಗಿ ಅಜ್ಜರಕಾಡು ಶವಾಗಾರದಲ್ಲಿದ್ದ ಈ ಮೃತದೇಹವನ್ನು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಕಾನೂನು ಪ್ರಕ್ರಿಯೆ ನಡೆಸಿ ಧಪನ ಮಾಡಲಾಗಿತ್ತು.

ಈ ಕುರಿತು ಮಾಹಿತಿ ಪಡೆದುಕೊಂಡ ಪಂಜಾಬ್ ಪೊಲೀಸರು, ಮಲ್ಪೆಗೆ ಆಗಮಿಸಿದ್ದು, ಹೆಚ್ಚಿನ ತನಿಖೆಗಾಗಿ ಮೃತದೇಹವನ್ನು ಹೊರ ತೆಗೆಯುವಂತೆ ಸಂಬಂಧಪಟ್ಟವರಿಗೆ ಲಿಖಿತವಾಗಿ ಮನವಿ ಮಾಡಿಕೊಂಡಿದ್ದಾರೆ. ಅದರಂತೆ ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಮಲ್ಪೆ ಎಸ್ಸೈ ಶಕ್ತಿವೇಲು ಹಾಗೂ ಪಂಜಾಬ್ ಪೊಲೀಸರ ಸಮ್ಮುಖದಲ್ಲಿ ಇದೀಗ ಮೃತದೇಹವನ್ನು ಹೊರತೆಗೆ ಯುವ ಪ್ರಕ್ರಿಯೆ ನಡೆಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News