ಸಚಿವ ಸಂಪುಟದ ಪುನಾರಚನೆ ಕುರಿತು ಸಿಎಂ ನಿರ್ಧಾರ: ಅರುಣ್ ಸಿಂಗ್

Update: 2022-05-14 09:55 GMT

ಬೆಂಗಳೂರು: ರಾಜ್ಯ ಸಚಿವಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಕಾಲದಲ್ಲಿ ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಿಳಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು. ಸಂಪುಟ ಪುನಾರಚನೆಯು ಮುಖ್ಯಮಂತ್ರಿಯ ಪರಮಾಧಿಕಾರ ಎಂದೂ ಅವರು ಹೇಳಿದರು.

ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸಲು ಬಯಸುವವರ ಪಟ್ಟಿಯನ್ನು ರಾಜ್ಯ ಕೋರ್ ಕಮಿಟಿ ಮತ್ತು ರಾಜ್ಯ ಚುನಾವಣಾ ಸಮಿತಿಯು ಕೇಂದ್ರ ಸಂಸದೀಯ ಮಂಡಳಿಗೆ ಶಿಫಾರಸು ಮಾಡುತ್ತದೆ. ಕೇಂದ್ರ ಸಂಸದೀಯ ಮಂಡಳಿಯು ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯತ್ವಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕಾಂಗ್ರೆಸ್ ಪಕ್ಷದೊಳಗೆ ಗೊಂದಲಗಳಿವೆ. ಬಿಜೆಪಿಯಲ್ಲಿ ನಾಯಕತ್ವ ಮತ್ತಿತರ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News