ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ರಾಜೀನಾಮೆ
Update: 2022-05-14 16:35 IST
ಹೊಸದಿಲ್ಲಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಎಸ್.ಎನ್. ಆರ್ಯ ಅವರಿಗೆ ಸಲ್ಲಿಸಿರುವುದಾಗಿ ಶನಿವಾರ ತಿಳಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ದೇಬ್ ಈ ಘೋಷಣೆಯನ್ನು ಮಾಡಿದ್ದಾರೆ.
ತ್ರಿಪುರಾ ಬಿಜೆಪಿ ಘಟಕದಲ್ಲಿ ಆಂತರಿಕ ಕಲಹ ನಡೆಯುತ್ತಿರುವುದಾಗಿ ಕಳೆದ ಕೆಲವು ವಾರಗಳಿಂದ ವದಂತಿಗಳು ಹಬ್ಬಿತ್ತು.