ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡುವ ನಿಯಮಗಳನ್ನು ಸರಕಾರ ಶೀಘ್ರವೇ ಜಾರಿಗೆ ತರಲಿದೆ: ಸುಶೀಲ್ ಚಂದ್ರ

Update: 2022-05-14 11:44 GMT

ಹೊಸದಿಲ್ಲಿ: ಮತದಾರರ ಪಟ್ಟಿಗೆ (ವೋಟರ್ ಐಡಿ) ಆಧಾರ್ ಲಿಂಕ್ ಮಾಡುವ ನಿಯಮಗಳನ್ನು ಸರಕಾರವು ಶೀಘ್ರದಲ್ಲೇ ಜಾರಿಗೆ ತರಬಹುದು. ಆಧಾರ್ ವಿವರಗಳನ್ನು ಹಂಚಿಕೊಳ್ಳುವುದು ಮತದಾರರಿಗೆ ಸ್ವಯಂಪ್ರೇರಿತವಾಗಿರುತ್ತದೆ. ಆದರೆ ಹಾಗೆ ಮಾಡದವರು ಅದಕ್ಕೆ ಸಾಕಷ್ಟು ಕಾರಣಗಳನ್ನುನೀಡಬೇಕಾಗುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.

ಮತದಾರರು ಹಾಗೂ  ಚುನಾವಣಾ ಕರ್ತವ್ಯದಲ್ಲಿ ತೊಡಗಿರುವವರು ಕೊರೋನವೈರಸ್ ನಿಂದ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ವರ್ಷದ ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆಗಳು ಮುಕ್ತಾಯಗೊಂಡ ಐದು ರಾಜ್ಯಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸುವಲ್ಲಿ ಚುನಾವಣಾ ಸಮಿತಿಯು ಪ್ರಮುಖ ಪಾತ್ರ ವಹಿಸಿದೆ ಎಂದು ಚಂದ್ರು ಹೇಳಿದರು.

 18 ವರ್ಷ ತುಂಬಿದವರನ್ನು ಮತದಾರರಾಗಿ ನೋಂದಾಯಿಸಲು ವರ್ಷಕ್ಕೆ  ಒಂದರ ಬದಲಿಗೆ ನಾಲ್ಕು ದಿನಾಂಕ ಒದಗಿಸುವುದು ಹಾಗೂ  ಮತದಾರರ ಪಟ್ಟಿಯಲ್ಲಿ ನಕಲಿ ನಮೂದುಗಳನ್ನು ಪರಿಶೀಲಿಸಲು ಮತದಾರರ ಪಟ್ಟಿಗಳೊಂದಿಗೆ ಆಧಾರ್ ಲಿಂಕ್ ಮಾಡುವುದು ತಾನು ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಅವಧಿಯಲ್ಲಿ ನಡೆದ ಎರಡು ಪ್ರಮುಖ ಚುನಾವಣಾ ಸುಧಾರಣೆಯಾಗಿವೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಚಂದ್ರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News