ಮೇ 21ಕ್ಕೆ ದಾವೋಸ್ ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಬೊಮ್ಮಾಯಿ
Update: 2022-05-14 17:35 IST
ಬೆಂಗಳೂರು, ಮೇ 14: ‘ವಿಶ್ವ ಆರ್ಥಿಕ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳುವ ನಿಮಿತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇ 21ಕ್ಕೆ ದಾವೋಸ್‍ಗೆ ತೆರಳಲು ನಿರ್ಧರಿಸಿದ್ದಾರೆ.
ಈ ಶೃಂಗಸಭೆಗೆ ಕರ್ನಾಟಕ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದ್ದು, ಮೇ 21ಕ್ಕೆ ದಾವೋಸ್‍ಗೆ ತೆರಳಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮೇ 26ರ ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ದಾವೋಸ್ ಪ್ರವಾಸ ಕೈಗೊಳ್ಳುವ ಸಂಬಂಧ ಸಂಪುಟ ವಿಸ್ತರಣೆ ಸೇರಿದಂತೆ ರಾಜಕೀಯ ಗೊಂದಲಗಳ ಹಿನ್ನೆಲೆಯಲ್ಲಿ ಹಿಂದೇಟು ಹಾಕಿದ್ದ ಬೊಮ್ಮಾಯಿ ಅವರು ಇದೀಗ ದಾವೋಸ್ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದು, ಪ್ರವಾಸ ಕಾರ್ಯಕ್ರಮದ ಅಧಿಕೃತ ಪಟ್ಟಿ ಹೊರಬೀಳುವುದಷ್ಟೇ ಬಾಕಿ ಇದೆ ಎಂದು ಗೊತ್ತಾಗಿದೆ.