×
Ad

ಬಿಜೆಪಿ ಪ್ರಕೋಷ್ಠಗಳ ದ.ಕ.ಜಿಲ್ಲಾ ಸಮಾವೇಶ

Update: 2022-05-14 18:43 IST

ಮಂಗಳೂರು: ಬಿಜೆಪಿ ಪ್ರಕೋಷ್ಠಗಳ ದ.ಕ.ಜಿಲ್ಲಾ ಸಮಾವೇಶವು ನಗರದ ಕೆನರಾ ಬಾಲಕಿಯರ ಶಾಲೆಯ ಸುಧೀಂದ್ರ ಆಡಿಟೋರಿಯಂನಲ್ಲಿ ಶನಿವಾರ ನಡೆಯಿತು.

ಸಮಾವೇಶ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅಭಿವೃದ್ಧಿ ಯೋಜನೆಗಳನ್ನು ಜನತೆಗೆ ತಲುಪಿಸುವಲ್ಲಿ ಜಿಲ್ಲಾ ಹಾಗೂ ಮಂಡಲ ಪ್ರಕೋಷ್ಠಗಳ ಪದಾಧಿಕಾರಿಗಳ ಜವಾಬ್ದಾರಿ ಪ್ರಮುಖವಾಗಿದೆ. ಅಭಿವೃದ್ಧಿ ವಿಚಾರದಲ್ಲಿ ವಿಪಕ್ಷಗಳ ಟೀಕೆಗಳಿಗೆ ಆಯಾ ಪ್ರಕೋಷ್ಠಗಳು ಸೂಕ್ತ ಉತ್ತರ ನೀಡಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವಂತೆ ನೋಡಿಕೊಳ್ಳಬೇಕು ಎಂದರು.

ಸಂಘಟನಾತ್ಮಕವಾಗಿ ಹಾಗೂ ಸರಕಾರದ ಅಭಿವೃದ್ಧಿ ವಿಚಾರಗಳನ್ನು ಜನತೆಗೆ ಮನದಟ್ಟು ಮಾಡುವ ಸಲುವಾಗಿ ವಿವಿಧ ಪ್ರಕೋಷ್ಠಗಳನ್ನು ರಚಿಸಲಾಗಿದೆ. ಸರಕಾರದ ಸಾಧನೆಗಳ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಮನ್ನಣೆ ವ್ಯಕ್ತವಾಗುತ್ತಿದೆ. ಪಕ್ಷ ಸಂಘಟನೆ ಹಾಗೂ ಪ್ರಚಾರದ ಕೆಲಸಕ್ಕೆ ಹೆಗಲು ಕೊಡುವ ಹೊಣೆಗಾರಿಕೆ ಪ್ರಕೋಷ್ಠಗಳಿಗೆ ಇದೆ ಎಂದು ವೇದವ್ಯಾಸ ಕಾಮತ್ ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ.ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ರಾಜ್ಯ ಪ್ರಕೋಷ್ಠಗಳ ಸಂಚಾಲಕ ಭಾನು ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಕೈಗಾರಿಕಾ ಪ್ರಕೋಷ್ಠ ರಾಜ್ಯ ಸಂಚಾಲಕ ಪ್ರದೀಪ್ ಜಿ.ಪೈ, ರಾಜ್ಯ ಸಹ ಸಂಚಾಲಕ ಗುಂಜೂರು ಚರಣ್, ಜಿಲ್ಲಾ ಸಂಚಾಲಕ ಕೃಷ್ಣ ಶೆಟ್ಟಿ ಕಡಬ, ಜಿಲ್ಲಾ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News