ಶುಶ್ರೂಷಕರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-05-14 14:39 GMT

ಬೆಂಗಳೂರು, ಮೇ 14: ‘ಉದಾತ್ತ ಕಾರ್ಯದಲ್ಲಿ ತೊಡಗಿರುವವರು ಶುಶ್ರೂಷಕರು, ವೃತ್ತಿಯು ದೇವರ ಸಂದೇಶವಾಹಕರಂತೆ ಸಮಾಜಕ್ಕೆ ಸೇವೆ ಸಲ್ಲಿಸುತ್ತಾರೆ. ಅವರ ಸೇವೆಗೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ಬಣ್ಣಿಸಿದ್ದಾರೆ.

ಶನಿವಾರ ನಗರದಲ್ಲಿ ಶುಶ್ರೂಷಕಿ ಭಾರ್ಗವಿ ವಿ.ಎ. ಅವರಿಗೆ ‘ಫ್ಲಾರೆನ್ಸ್ ನೈಟಿಂಗೇಲ್' ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ಆರೋಗ್ಯ ಸೇವೆಯಲ್ಲಿ ಶುಶ್ರೂಷಕ ವೃತ್ತಿಯ ಪ್ರಾಮುಖ್ಯತೆ ಶ್ಲಾಘನೀಯ. ಶುಶ್ರೂಷಕರು ಆಧುನಿಕ ವೈದ್ಯಶಾಸ್ತ್ರದ ಎಲ್ಲ್ಲ ಅಂಶಗಳ ಜ್ಞಾನವನ್ನು ಹೊಂದಿರಬೇಕು ಮತ್ತು ಆಧುನಿಕ ವೈದ್ಯಕೀಯ ಉಪಕರಣಗಳನ್ನು ಬಳಸುವ ಪರಿಣತಿಯನ್ನು ಹೊಂದಿರಬೇಕು' ಎಂದು ಸಲಹೆ ನೀಡಿದರು.

‘ಸರಕಾರ ಮತ್ತು ಖಾಸಗಿ ಆಸ್ಪತ್ರೆಗಳು ಉತ್ತಮ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಜನರಿಗೆ ಉತ್ತಮ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ದಾದಿಯರನ್ನು ರಾಜ್ಯ ಸರಕಾರ ಗುರುತಿಸಿ ಗೌರವಿಸುತ್ತದೆ. ಕೋವಿಡ್ ಸೋಂಕಿನ ಸಂದರ್ಭವೂ ಸೇರಿದಂತೆ ರೋಗಿಗಳ ಆರೈಕೆಯಲ್ಲಿ ಶುಶ್ರೂಷಕರ ಸೇವೆ ಅನನ್ಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News