×
Ad

ವಿದ್ಯಾರ್ಥಿ ಬಸ್ ಪಾಸ್ ಜೂ.30ರವರೆಗೆ ವಿಸ್ತರಣೆ

Update: 2022-05-14 21:40 IST

ಬೆಂಗಳೂರು, ಮೇ 14: 2022-23ನೇ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭಗೊಳ್ಳುತ್ತಿದ್ದು, 2021-22ನೇ ಸಾಲಿನಲ್ಲಿ ಪಡೆದಿರುವ ವಿದ್ಯಾರ್ಥಿಗಳು ಬಸ್ ಪಾಸುಗಳನ್ನು ಇಟ್ಟುಕೊಂಡು ಜೂ.30ರವರೆಗೆ ಕೆಸ್ಸಾರ್ಟಿಸಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. 

ಹೊಸ ಬಸ್ ಪಾಸುಗಳ ವಿತರಣಾ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುತ್ತಿದ್ದು, ವಿದ್ಯಾರ್ಥಿಗಳು ನಿಯಮಾನುಸಾರ ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ವಿಭಾಗಗಳ ವ್ಯಾಪ್ತಿಯಲ್ಲಿ ಪಾಸುಗಳನ್ನು ಪಡೆಯಬಹುದಾಗಿದೆ.

ಈ ಬಗ್ಗೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ತಪ್ಪದೇ ಮಾಹಿತಿ ಒದಗಿಸಲು ಕ್ರಮಕೈಗೊಂಡು ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕ್ರಮ ವಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News