ರಾಜ್ಯದಲ್ಲಿ ಶನಿವಾರ 103 ಮಂದಿಗೆ ಕೊರೋನ ದೃಢ: ಸಾವಿನ ಸಂಖ್ಯೆ ಶೂನ್ಯ

Update: 2022-05-14 18:49 GMT

 ಬೆಂಗಳೂರು, ಮೇ 14: ರಾಜ್ಯದಲ್ಲಿ ಶನಿವಾರ 103 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೂನ್ಯವಾಗಿದ್ದು, 96 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,49,549ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,063ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1868ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 103 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 96, ದಕ್ಷಿಣ ಕನ್ನಡ 5, ಧಾರವಾಡ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 96 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶನಿವಾರ 96 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,85,336 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,962 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 17,66,581 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News