ಸಂಪುಟ ವಿಸ್ತರಣೆ ಸಂಬಂಧಿಸಿ ಇನ್ನೆರಡು ದಿನಗಳಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ: ಸಿಎಂ ಬೊಮ್ಮಾಯಿ
Update: 2022-05-15 12:36 IST
ಹುಬ್ಬಳ್ಳಿ, ಮೇ 15: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಇನ್ನೆರಡು ದಿನಗಳಲ್ಲಿ ಪಕ್ಷದ ವರಿಷ್ಠರನ್ನು ಸಂಪರ್ಕಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿ ವರಿಷ್ಠರ ಸಲಹೆಯನ್ನು ಪಾಲಿಸಲಾಗುವುದು. ರಾಜ್ಯಸಭಾ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿ ಪಕ್ಷದ ಕೋರ್ ಕಮಿಟಿ ಸಭೆ ನಡೆಸಲಾಗಿದೆ. ಈ ಬಗ್ಗೆ ಸಹ ವರಿಷ್ಠರು ಗಮನ ಹರಿಸಲಿದ್ದಾರೆ ಎಂದು ಹೇಳಿದ್ದಾರೆ.
ಸಂಪುಟಕ್ಕೆ ಬಿ.ವೈ.ವಿಜಯೇಂದ್ರ ಸಂಪುಟ ಸೇರ್ಪಡೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಮುಖ್ಯಮಂತ್ರಿ ಹೇಳಿದರು.