×
Ad

ಗುಂಡ್ಲುಪೇಟೆ | ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತ್ಯು, ಇಬ್ಬರಿಗೆ ಗಾಯ

Update: 2022-05-15 15:59 IST

ಚಾಮರಾಜನಗರ, ಮೇ 15: ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ಇಂದು ರಥೋತ್ಸವ ಜಾತ್ರೆಯ ವೇಳೆ ಅವಘಡ ಸಂಭವಿಸಿದ್ದು ರಥದ ಚಕ್ರದಡಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿದ್ದಾನೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕಂದೇಗಾಲ ಗ್ರಾಮದ ಸರ್ಪಭೂಷಣ (27) ಎಂದು ಗುರುತಿಸಲಾಗಿದೆ. ಕಬ್ಬಹಳ್ಳಿ ಗ್ರಾಮದ ಸ್ವಾಮಿ ಎಂಬವರು ಸೇರಿದಂತೆ ಇಬ್ಬರು ಗಾಯಗೊಂಡಿದ್ದು, ಅವರಿಗೆ ಗುಂಡ್ಲುಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕಳುಹಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಸಮೀಪದ ಸ್ಕಂದಗಿರಿಯ ಪಾರ್ವತಿ ಬೆಟ್ಟದಲ್ಲಿ ರವಿವಾರ ಅದ್ದೂರಿ ರಥೋತ್ಸವ ಜರುಗಿದೆ. ರಥವನ್ನು ಎಳೆಯುವ ವೇಳೆ ಸರ್ಪಭೂಷಣ ರಥದ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

 ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಪಾರ್ವತಿ ಬೆಟ್ಟದಲ್ಲಿ ರಥೋತ್ಸವ ಜಾತ್ರೆ ನಡೆದಿರಲಿಲ್ಲ. ಆದ್ದರಿಂದ ಈ ಬಾರಿ ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News